ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿಗೆ ಶಾಲಾ ರಸ್ತೆ ನಿರ್ಮಾಣಕ್ಕೆ ₹15 ಲಕ್ಷ ಅನುದಾನ: ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ
ಪುತ್ತೂರು ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ ಇದರ ನೂತನ ಪಿ ಯು ವಿಜ್ಞಾನ ಹಾಗೂ ಪ್ರೌಢ ಶಾಲಾ ನೂತನ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಶಾಲಾ ರಸ್ತೆ ನಿರ್ಮಾಣಕ್ಕೆ 15 ಲಕ್ಷ ರೂಪಾಯಿ ಅನುದಾನ ಒದಗಿಸಿ ಕೊಟ್ಟ ಕ್ಷೇತ್ರದ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ ಸಂಸ್ಥೆ ಇದರ ವತಿಯಿಂದ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿ ಸನ್ಮಾನಿಸಲಾಯಿತು .
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಉಸ್ತುವಾರಿ ಸಚಿವ ಯು. ಟಿ.ಖಾದರ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
